alex Certify ಇಂದಿನಿಂದ ಏಕದಿನ ‘ವಿಶ್ವಕಪ್’ ಆರಂಭ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಏಕದಿನ ‘ವಿಶ್ವಕಪ್’ ಆರಂಭ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಇಂದಿನಿಂದ ಕ್ರಿಕೆಟ್‌ ವಿಶ್ವಕಪ್‌ ಪಂದ್ಯಾವಳಿಗಳು ಆರಂಭವಾಗುತ್ತಿದ್ದು, ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ.

ಹಾಗೆಯೇ ರೋಹಿತ್‌ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ.

ಇನ್ನು ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೊಲ್ಟೇಜ್ ಪಂದ್ಯ ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನುಳಿದಂತೆ ವಿಶ್ವ ಕಪ್‌ ಪಂದ್ಯಾವಳಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 48 ಪಂದ್ಯಗಳು ನಡೆಯಲಿದೆ. ಈ ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.
ಇಲ್ಲಿ ಪ್ರತಿ ತಂಡಗಳು ಒಟ್ಟು 9 ಪಂದ್ಯಗಳನ್ನಾಡಲಿದೆ. ಇದರಲ್ಲಿ ಅತ್ಯಧಿಕ ಪಾಯಿಂಟ್ಸ್ ಪಡೆಯುವ 4 ತಂಡಗಳು ಸೆಮಿಫೈನಲ್​ ಹಂತಕ್ಕೇರಲಿದೆ.
ಸೆಮಿಫೈನಲ್​​ನಿಂದ ಎರಡು ತಂಡಗಳು ಫೈನಲ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಫೈನಲ್​ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...