alex Certify ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆ; ಈ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆ; ಈ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನಿತ್ಯ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು ಜಲಾವೃತವಾಗಿವೆ.

ಇದರ ಮಧ್ಯೆ ಹವಾಮಾನ ಇಲಾಖೆ, ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ಕೊಪ್ಪಳ, ಕಲಬುರಗಿ, ಬಳ್ಳಾರಿ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮಂಡ್ಯ, ಹಾಸನ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...