alex Certify ಇಂದು ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ವಿಜಯ್ ದೇವರಕೊಂಡ ನಟನೆಯ ʼಲೈಗರ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ವಿಜಯ್ ದೇವರಕೊಂಡ ನಟನೆಯ ʼಲೈಗರ್ʼ

ವಿಜಯ್ ದೇವರಕೊಂಡ ನಟನೆಯ ಪೂರಿ ಜಗನ್ನಾಥ್ ನಿರ್ದೇಶನದ ಲೈಗರ್ ಚಿತ್ರದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟಿಕೊಂಡಿದ್ದರು. ಆದರೆ ಅಂದುಕೊಂಡಂತೆ ಈ ಸಿನಿಮಾ ಹಿಟ್ ಆಗಲಿಲ್ಲ.

ಇದೇ ವರ್ಷ ಆಗಸ್ಟ್ 16ರಂದು ತೆರೆಕಂಡಿದ್ದ ಲೀಗರ್ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ವಿಫಲವಾಯಿತು.ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗಳನ್ನು ಮಾಡಲಾಯಿತು.

ಇಂದು ಸಂಜೆ 7 ಗಂಟೆಗೆ ಕನ್ನಡದ ಜನಪ್ರಿಯ ಚಾನೆಲ್ ಆದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈ ಸಿನಿಮಾ ಪ್ರಸಾರವಾಗಲಿದೆ ಈ ಕುರಿತು ಸ್ಟಾರ್ ಸುವರ್ಣ ವಾಹಿನಿ ತನ್ನ ಅಧಿಕೃತ instagram ಖಾತೆಯಲ್ಲಿ ಹಂಚಿಕೊಂಡಿದೆ.

ಧರ್ಮ ಪ್ರೊಡಕ್ಷನ್ಸ್ ಹಾಗೂ ಪೂರಿ ಕನೆಕ್ಟ್ ಬ್ಯಾನರ್ ನಡಿ ಕರಣ್ ಜೋಹರ್, ಪೂರಿ ಜಗನ್ನಾಥ್, ಅಪೂರ್ವ ಮೆಹತಾ, ಚಾರ್ಮಿ ಕೌರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ವಿಜಯ್ ದೇವರಕೊಂಡ ಸೇರಿದಂತೆ ಅನನ್ಯ ಪಾಂಡೆ, ರಮ್ಯಕೃಷ್ಣ ಹಾಗೂ ರೋಣಿತ್ ರಾಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುನಿಲ್ ಕಶ್ಯಪ್ ಅವರ ಸಂಗೀತ ಈ ಚಿತ್ರಕ್ಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...