ಇಂದು ದುಬೈನಲ್ಲಿ ನಡೆಯಲಿರುವ ಐಪಿಎಲ್ ನ 50ನೇ ಪಂದ್ಯದಲ್ಲಿ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.
ಎಂಎಸ್ ಧೋನಿ ಅವರ ಅಪ್ಪಟ ಅಭಿಮಾನಿಯಾಗಿರುವ ರಿಷಬ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅತ್ಯುತ್ತಮ ನಾಯಕರಾಗಿದ್ದಾರೆ. ಇಂದು ರಿಷಬ್ ಪಂತ್ 24ನೇ ವಸಂತಕ್ಕೆ ಕಾಲಿಟ್ಟಿದ್ದು ಯಾವ ರೀತಿ ಮಿಂಚಲಿದ್ದಾರೆ ಕಾದುನೋಡಬೇಕಾಗಿದೆ.
ಭರ್ಜರಿ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ವಿದ್ಯುತ್ ಬಳಕೆದಾರರಿಗೆ ಕಂಪನಿಗಳಿಂದ ಹಣ ವಾಪಸ್
ಚೆನ್ನೈ ಸೂಪರ್‌ಕಿಂಗ್ಸ್ ಪಾಯಿಂಟ್ ಟೇಬಲ್ ನಲ್ಲಿ ಮೊದಲನೇ ಸ್ಥಾನದಲ್ಲಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದೆ. ಎರಡು ತಂಡಗಳು 18 ಅಂಕಗಳನ್ನು ಪಡೆದಿದ್ದು, ನೆಟ್ ರನ್ ರೇಟ್ ನಿಂದ ಚೆನ್ನೈ ಸೂಪರ್‌ಕಿಂಗ್ಸ್ ಮೊದಲನೇ ಸ್ಥಾನದಲ್ಲಿದೆ.
ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದರು. ಎರಡು ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿದ್ದು, ಇಂದು ರನ್ ಗಳ ಹೊಳೆ ಹರಿಯುವ ಸಾಧ್ಯತೆ ಇದೆ.