
ಹರಾರೆ ಕ್ರೀಡಾಂಗಣದಲ್ಲಿ ಇಂದು ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ ನಡೆಯಲಿದೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎರಡೂ ತಂಡಗಳು ಒಂದೊಂದು ಜಯಗಳಿಸುವ ಮೂಲಕ ಸರಣಿ ಸಮಬಲ ಮಾಡಿಕೊಂಡಿವೆ. ಇಂದು ಯಾವ ತಂಡ ಗೆಲ್ಲುವುದೋ ಆ ತಂಡ ಸರಣಿ ಕೈವಶ ಮಾಡಿಕೊಳ್ಳಲಿದೆ.
ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯ
ಬಾಂಗ್ಲಾದೇಶ ತಂಡ ಈಗಾಗಲೇ ಜಿಂಬಾಬ್ವೆ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ಜಯಿಸಿದೆ. ಕಳೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 23ರನ್ ಗಳಿಂದ ಭರ್ಜರಿ ಜಯ ಸಾಧಿಸಿದ ಜಿಂಬಾಬ್ವೆ ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿದಂತಾಗಿದೆ. ಇಂದು ಎರಡು ತಂಡಗಳಿಂದ ರನ್ ಗಳ ಸುರಿಮಳೆ ಹರಿಯುವ ಸಾಧ್ಯತೆ ಇದೆ.