
ಇಂದು ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಮೊದಲನೇ ಏಕದಿನ ಪಂದ್ಯವನ್ನಾಡಲು ಸಜ್ಜಾಗಿವೆ.
ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ನ್ಯೂಜಿಲ್ಯಾಂಡ್ ತಂಡದಲ್ಲಿ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಟಾಮ್ ಲಾಥಮ್ ಗೆ ನ್ಯೂಜಿಲ್ಯಾಂಡ್ ತಂಡದ ನಾಯಕತ್ವ ವಹಿಸಲಾಗಿದೆ.
ಇಳಿಕೆಯಾಗುತ್ತಿದೆಯಾ ʼಕ್ಲಬ್ ಹೌಸ್ʼ ಜನಪ್ರಿಯತೆ…? ಇಂಟ್ರಸ್ಟಿಂಗ್ ಆಗಿದೆ ಈ ಮಾಹಿತಿ
ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ರನ್ನು ನ್ಯೂಜಿಲ್ಯಾಂಡ್ ನ ಯುವ ಕ್ರಿಕೆಟಿಗರು ಯಾವ ರೀತಿ ಕಟ್ಟಿಹಾಕಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಪಂದ್ಯ ಪ್ರಸಾರವಾಗಲಿದೆ.