alex Certify ಇಂದು ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಣ ಏಕದಿನ ಸರಣಿಯ ಅಂತಿಮ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಣ ಏಕದಿನ ಸರಣಿಯ ಅಂತಿಮ ಪಂದ್ಯ

ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಣ ಏಕದಿನ ಸರಣಿಯ ಅಂತಿಮ ಪಂದ್ಯ ಇಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ನಡೆಯಲಿದೆ. ತಮೀಮ್ ಇಕ್ಬಾಲ್ ನೇತೃತ್ವದ ಬಾಂಗ್ಲಾದೇಶ ತಂಡ ಈಗಾಗಲೇ ಎರಡು ಪಂದ್ಯಗಳಲ್ಲಿ ಜಯ ಕಂಡಿದ್ದು ಇಂದಿನ ಪಂದ್ಯವನ್ನು ಗೆದ್ದು ವೈಟ್ ವಾಶ್ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಬಾಂಗ್ಲಾದೇಶದ ಸ್ಟಾರ್ ಆಲ್ರೌಂಡರ್ ಶಕಿಬ್ ಅಲ್ ಹಸನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಮಿಂಚುತ್ತಿದ್ದಾರೆ.

ಬ್ರೆಂಡನ್ ಟೇಲರ್ ನಾಯಕತ್ವದ ಜಿಂಬಾಬ್ವೆ ತಂಡ ಇಂದಿನ ಪಂದ್ಯದಲ್ಲಾದರೂ ಗೆದ್ದು ವೈಟ್ ವಾಶ್ ಅವಮಾನವನ್ನು ತಪ್ಪಿಸಿಕೊಳ್ಳುತ್ತಾ ಕಾದು ನೋಡಬೇಕಾಗಿದೆ. ಟೆಸ್ಟ್‌ ನಲ್ಲೂ ಈಗಾಗಲೇ ಜಿಂಬಾಬ್ವೆ ವಿರುದ್ಧ ಬಾಂಗ್ಲಾದೇಶ ಜಯ ಗಳಿಸಿದೆ ಜುಲೈ 22ರಿಂದ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...