ನವನ್ ಶ್ರೀನಿವಾಸ್ ನಿರ್ದೇಶನದ ‘ಕಂಬ್ಳಿಹುಳ’ ಸಿನಿಮಾದ ಟ್ರೈಲರ್ ಇಂದು ಸಂಜೆ 5 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.
ಈ ಚಿತ್ರದಲ್ಲಿ ಅಂಜನ್ ಹಾಗೂ ಅಶ್ವಿತಾ ಮುಖ್ಯಭೂಮಿಕೆಯಲ್ಲಿದ್ದು, ದೀಪಕ್ ರೈ ಪಣಜೆ, ರೋಹಿತ್ ಕುಮಾರ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ
ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ಪುನೀತ್, ಸವೀನ್ ವಿಜಯ್ ಹಾಗೂ ಗುರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶಿವಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದಾರೆ.
ಫ್ಯಾಮಿಲಿ ಎಂಟರ್ ಟೇನರ್ ಕಥಾಹಂದರ ಹೊಂದಿರುವ ಈ ಸಿನಿಮಾ ಈಗಾಗಲೇ ಟೈಟಲ್ ನಿಂದಲೇ ಸಾಕಷ್ಟು ಸದ್ದು ಮಾಡಿದೆ