alex Certify ಇಂದು ಬಿಡುಗಡೆಯಾಗಲಿದೆ ‘ಕಿರಾತಕ 2’ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಲಿದೆ ‘ಕಿರಾತಕ 2’ ಟ್ರೈಲರ್

ಪ್ರದೀಪ್ ರಾಜ್ ನಿರ್ದೇಶನದ ಬಹುನಿರೀಕ್ಷಿತ ‘ಕಿರಾತಕ 2’ ಟ್ರೈಲರ್ ಇಂದು ಮಧ್ಯಾಹ್ನ 1:30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದು, ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ಆರ್ ಕೆ ತೇಜಸ್ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾವನ್ನು ಜನಚಿತ್ತ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಎಂಬಿ ಬೈಂದೂರ್ ನಿರ್ಮಾಣ ಮಾಡಿದ್ದಾರೆ.

ಜೂನ್ 30ರಂದು ರಾಜ್ಯದ್ಯಂತ ತೆರೆಕಾಣಲಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದ್ದು, ಪ್ರದ್ಯೋತ್ತನ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಹೊಸ ಕಲಾವಿದರ ದಂಡೆ ಇರುವ ಈ ಸಿನಿಮಾದಲ್ಲಿ ಲವ್ ಸ್ಟೋರಿ ಜೊತೆಗೆ ಆಕ್ಷನ್ ಕಾಮಿಡಿ ಒಳಗೊಂಡಿದ್ದು, ಪ್ರೇಕ್ಷಕರ ಮನಮುಟ್ಟಲಿದೆ ಎಂದು ನಿರ್ದೇಶಕ ಪ್ರದೀಪ್ ರಾಜ್ ಇತ್ತೀಚಿಗೆ ವಾಹಿನಿವೊಂದರಲ್ಲಿ ಹಂಚಿಕೊಂಡಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...