
ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಕ್ಕತ್ ಸೌಂಡ್ ಮಾಡಿರುವ ಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಮ್ಯಾಟ್ನಿ ಚಿತ್ರದ ವಿಡಿಯೋ ಹಾಡು ಇಂದು ಆನಂದ್ ಆಡಿಯೋ youtube ಚಾನೆಲ್ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಸಂಜೆ ಮೇಲೆ ಎಂಬ ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಅವರು ಸಾಹಿತ್ಯ ಹಾಗೂ ಸಂಗೀತ ಸಂಯೋಜನೆ ನೀಡಿದ್ದಾರೆ.
ಮನೋಹರ ಕಾಂಪಲ್ಲಿ ನಿರ್ದೇಶನದ ರೊಮ್ಯಾಂಟಿಕ್ ಲವ್ ಸ್ಟೋರಿ ಕಥಾಂದರದ ಈ ಚಿತ್ರಕ್ಕೆ f3 ಪ್ರೊಡಕ್ಷನ್ ಬ್ಯಾನರ್ ನಡಿ ಪಾರ್ವತಿ ಗೌಡ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಲ್ಲಿ ಅದಿತಿ ಪ್ರಭುದೇವ ಸಹ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಮಧ್ಯಾಹ್ನ ಹಾಡು ರಿಲೀಸ್ ಆಗಲಿದೆ.

