
ಸೂರ ನಿರ್ದೇಶನದ ಶ್ರೀನಗರ ಕಿಟ್ಟಿ ನಟನೆಯ ಬಹುನಿರೀಕ್ಷೆಯ ‘ಗೌಳಿ’ ಚಿತ್ರದ ಟೀಸರ್ ಇಂದು ಸಂಜೆ 5-30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ ಸೋಹನ್ ಫ್ಯಾಕ್ಟರಿ ಫಿಲ್ಮ್ ಬ್ಯಾನರ್ ನಡಿ ರಘು ಸಿಂಗಮ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಶಶಾಂಕ್ ಶೇಷಗಿರಿ ಸಂಗೀತವಿದೆ ಈಗಾಗಲೇ ಪೋಸ್ಟರ್ ಮೂಲಕವೇ ಈ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ.
ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಬಿಎಂಟಿಸಿ ಬಸ್
ಪಾವನಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು ರಂಗಾಯಣ ರಘು, ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ಶರತ್ ಲೋಹಿತಾಶ್ವ ಶಿವಣ್ಣ ರುದ್ರೇಶ್, ಸೇರಿದಂತೆ ಮುಂತಾದ ಕಲಾವಿದರು ತೆರೆಹಂಚಿಕೊಂಡಿದ್ದು, ಇದೊಂದು ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.
