ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಏಕದಿನ ಸರಣಿಯ ಮೂರನೇ ಪಂದ್ಯ ವರ್ಸೆಸ್ಟರ್ ನ ನ್ಯೂ ರೋಡ್ ನಲ್ಲಿ ನಡೆಯಲಿದೆ.
ಈಗಾಗಲೇ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಎರಡು ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಭಾರತ ಮಹಿಳಾ ಕ್ರಿಕೆಟ್ ತಂಡ ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ಕೇಟ್ ಕ್ರಾಸ್ ಅವರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿತ್ತು. ಇಂಗ್ಲೆಂಡ್ ತಂಡ 5 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್
ಮಿಥಾಲಿ ರಾಜ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಅಂತಿಮ ಪಂದ್ಯದಲ್ಲಾದರೂ ಜಯ ಗಳಿಸುತ್ತಾ ಕಾದು ನೋಡಬೇಕಾಗಿದೆ. ಐಸಿಸಿ ಮಹಿಳಾ ಏಕದಿನ ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ತುಂಬಾ ಬಲಿಷ್ಠವಾಗಿದೆ. ಇಂದು ಎರಡೂ ತಂಡಗಳ ನಡುವೆ ಭರ್ಜರಿ ಪೈಪೋಟಿ ನಡೆಯಲಿದೆ.