alex Certify ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ? ಇಲ್ಲಿದೆ ಡೀಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ? ಇಲ್ಲಿದೆ ಡೀಟೇಲ್ಸ್

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಜನ ಹೈರಾಣಾಗಿ ಹೋಗಿದ್ದು ಮಳೆ ನಿಂತರೆ ಸಾಕಪ್ಪ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಇಂದು ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾನುವಾರವೂ ಸಹ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಕೆಲವೆಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಅಲ್ಲದೆ ಜೀವ ಹಾನಿಯೂ ಸಂಭವಿಸಿದ್ದು, ಮನೆ ಕುಸಿತದಂತಹ ಘಟನೆಗಳು ಸಹ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...