ಜುಲೈ 18ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದರೆ ಯುಪಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಸ್ಪರ್ಧಿಸಿದ್ದರು. ದ್ರೌಪದಿ ಮುರ್ಮು ಅವರಿಗೆ ಯುಪಿಎ ಮೈತ್ರಿಕೂಟದಲ್ಲಿದ್ದ ಕೆಲವೊಂದು ಪಕ್ಷಗಳು ಬೆಂಬಲಿಸಿದ್ದು ಗಮನಾರ್ಹ.
ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗುವುದು ಖಚಿತವಾಗಿದ್ದು, ಇಂದು ಸಂಜೆಯ ಒಳಗಾಗಿ ಫಲಿತಾಂಶ ಹೊರ ಬೀಳುವ ನಿರೀಕ್ಷೆ ಇದೆ.