
ತೆಲುಗು ಹಾಗೂ ಕನ್ನಡ ಸಿನಿಮಾರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಶಾನ್ವಿ ಶ್ರೀವಾಸ್ತವ ಕಳೆದ ವರ್ಷ ‘ಮಹಾವೀರ್ಯಾರ್’ ಎಂಬ ಮಲಯಾಳಂ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಮೂಲಕ ಶಾನ್ವೀ ಶ್ರೀವಾಸ್ತವ ಮಾಲಿವುಡ್ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ನಿವಿನ್ ಪೌಲಿ, ಆಸಿಫ್ ಅಲಿ ಹಾಗೂ ಶಾನ್ವಿ ಶ್ರೀವಾತ್ಸವ ಮುಖ್ಯಭೂಮಿಕೆಯಲ್ಲಿದ್ದಾರೆ.
ಈ ಚಿತ್ರದ ಟೀಸರ್ ಇಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದ್ದು, ಈ ಕುರಿತು ಶಾನ್ವಿ ಶ್ರೀವಾತ್ಸವ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಬ್ರಿದ್ ಶೈನ್ ಈ ಸಿನಿಮಾ ನಿರ್ದೇಶಿಸಿದ್ದಾರೆ, ನಿವಿನ್ ಪೌಲಿ ನಿರ್ಮಾಣದ ಈ ಚಿತ್ರಕ್ಕೆ ಇಶಾನ್ ಚಬ್ರ ಸಂಗೀತ ಸಂಯೋಜನೆ ನೀಡಿದ್ದಾರೆ.
