ಸೆಪ್ಟೆಂಬರ್ 18ರ ಇಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 72ನೇ ಹುಟ್ಟುಹಬ್ಬವಿದ್ದು, ಅಭಿಮಾನ್ ಸ್ಟುಡಿಯೋದಲ್ಲಿರುವ ಪುಣ್ಯಭೂಮಿ ಮತ್ತು ಮೈಸೂರಿನ ವಿಷ್ಣುವರ್ಧನ್ ಸ್ಮಾರಕ ಸ್ಥಳದಲ್ಲಿ ಅದ್ದೂರಿ ಆಚರಣೆಗೆ ಅಭಿಮಾನಿಗಳು ಮುಂದಾಗಿದ್ದಾರೆ.
ಮೈಸೂರಿನ ಸ್ಮಾರಕದ ಬಳಿ ಅಭಿಮಾನಿಗಳು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ವಿಷ್ಣುವರ್ಧನ್ ಕುಟುಂಬ ಸದಸ್ಯರು ಸಹ ಅಲ್ಲಿ ಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಪುಣ್ಯಭೂಮಿಯಲ್ಲಿ ಅನ್ನದಾನ, ನೇತ್ರದಾನ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದು ಜೊತೆಗೆ ಸಾಂಸ್ಕೃತಿಕ ತಂಡಗಳು ಪ್ರದರ್ಶನ ನೀಡಲಿವೆ. ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮಕ್ಕೆ ಅಭಿಮಾನ್ ಸ್ಟುಡಿಯೋದಲ್ಲಿ 50,000ಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ.