alex Certify ಇಂದು ‘ಹೋಮ್ ಮಿನಿಸ್ಟರ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ‘ಹೋಮ್ ಮಿನಿಸ್ಟರ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಏಪ್ರಿಲ್ 1ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಜ್ಜಾಗಿರುವ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ ಚಿತ್ರದ ವಿಡಿಯೋ ಹಾಡೊಂದನ್ನು ಇಂದು ಸಂಜೆ 6 ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.

‘ಸೀತಾ ಗೀತಾ ಮಾಲಾ’ ಎಂಬ ಈ ಹಾಡಿಗೆ ಕೌಶಿತ್ ಹಾಗೂ ಪದ್ಮಲತಾ ಧ್ವನಿಗೂಡಿಸಿದ್ದು, ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಗೂ ಗಿಬ್ರಾನ್ ಸಂಗೀತ ನೀಡಿದ್ದಾರೆ.

ಸುಜಯ್ ಶ್ರೀ ಹರಿ ನಿರ್ದೇಶನದ ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಜೋಡಿಯಾಗಿ ಬಹುಭಾಷಾ ನಟಿ ವೇದಿಕಾ ಅಭಿನಯಿಸಿದ್ದಾರೆ. ತಾನ್ಯ ಹೋಪ್, ಅವಿನಾಶ್, ಸಾಧುಕೋಕಿಲಾ, ಸುಧಾ ಬೆಳವಾಡಿ, ಸುಮನ್ ರಂಗನಾಥ್ ಸೇರಿದಂತೆ ಮುಂತಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಶ್ರೇಯಸ್ ಚಿತ್ರ ಬ್ಯಾನರ್ ನಡಿ ಪೂರ್ಣ ನಾಯ್ಡು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...