alex Certify ಇತಿಹಾಸವನ್ನೇ ಸೃಷ್ಟಿಸಿದ್ದಾರೆ ಈ ಕ್ರಿಕೆಟರ್‌; ICCಯಿಂದ ವಿಶೇಷ ಗೌರವ ಪಡೆದ ಮೊದಲ ಭಾರತೀಯ ಆಟಗಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇತಿಹಾಸವನ್ನೇ ಸೃಷ್ಟಿಸಿದ್ದಾರೆ ಈ ಕ್ರಿಕೆಟರ್‌; ICCಯಿಂದ ವಿಶೇಷ ಗೌರವ ಪಡೆದ ಮೊದಲ ಭಾರತೀಯ ಆಟಗಾರ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಇತಿಹಾಸ ಸೃಷ್ಟಿಸಿದ್ದಾರೆ. ಐಸಿಸಿಯಿಂದ ಈ ವಿಶಿಷ್ಟ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ವರ್ಷದ ಅತ್ಯುತ್ತಮ ಟಿ20 ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ. ಐಸಿಸಿ ಟಿ20 ವರ್ಷದ ಕ್ರಿಕೆಟಿಗ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್. ಸೂರ್ಯಕುಮಾರ್ ಯಾದವ್ 2022 ರಲ್ಲಿ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ.

ಅವರು 31 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 46.56ರ ಅತ್ಯುತ್ತಮ ಸರಾಸರಿಯಲ್ಲಿ 1164 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕಗಳು ಮತ್ತು 9 ಅರ್ಧ ಶತಕಗಳು ಸೇರಿವೆ. ಈ ಅವಧಿಯಲ್ಲಿ ಸೂರ್ಯಕುಮಾರ್ ಯಾದವ್ 68 ಸಿಕ್ಸರ್ ಮತ್ತು 106 ಬೌಂಡರಿಗಳನ್ನು ಬಾರಿಸಿದ್ದಾರೆ. ಜಿಂಬಾಬ್ವೆಯ ಸಿಕಂದರ್ ರಜಾ, ಇಂಗ್ಲೆಂಡ್‌ನ ಸ್ಯಾಮ್ ಕರೆನ್ ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅವರನ್ನು ಹಿಂದಿಕ್ಕುವ ಮೂಲಕ ಸೂರ್ಯಕುಮಾರ್‌ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಪ್ರಸ್ತುತ ಸೂರ್ಯಕುಮಾರ್‌, ವಿಶ್ವದ ನಂಬರ್ 1 ಟಿ20 ಬ್ಯಾಟ್ಸ್‌ಮನ್.

ಐಸಿಸಿಯ ಈ ಗೌರವ ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಸೂರ್ಯ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ ಕ್ಯಾಲೆಂಡರ್ ವರ್ಷದಲ್ಲಿ T20 ಕ್ರಿಕೆಟ್‌ನಲ್ಲಿ 1000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗ ಇವರು. ಐಸಿಸಿ, ಸೂರ್ಯಕುಮಾರ್ ಯಾದವ್ ಸಾಧನೆಯನ್ನು ಗುರುತಿಸಿದೆ. ಐಸಿಸಿ ಟಿ20 ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ 908 ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಪರ 45 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 46.41 ರ ಅತ್ಯುತ್ತಮ ಸರಾಸರಿಯಲ್ಲಿ 1578 ರನ್ ಗಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...