ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇತ್ತೀಚಿನ ಟೆಸ್ಟ್ ಬೌಲಿಂಗ್ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಟೀಂ ಇಂಡಿಯಾದ ಆಟಗಾರ ನಂಬರ್-1 ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ. ಭಾರತದ ಈ ಬೌಲರ್ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಅವರಿಂದ ಅಗ್ರಪಟ್ಟವನ್ನು ಕಿತ್ತುಕೊಂಡಿದ್ದಾರೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದರು ಈತ.
ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ವಿಶ್ವದ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. 36 ವರ್ಷ ವಯಸ್ಸಿನ ಅಶ್ವಿನ್ 2015ರಲ್ಲಿ ನಂಬರ್ 1 ಟೆಸ್ಟ್ ಬೌಲರ್ ಎಂಬ ಗೌರವವನ್ನು ಗಳಿಸಿದ್ದರು. ನಂತರ ಕೂಡ ಹಲವು ಬಾರಿ ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಅಶ್ವಿನ್ 869 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಜೇಮ್ಸ್ ಆಂಡರ್ಸನ್ 859 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ.
ಟೀಂ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಬೌಲಿಂಗ್ ಮಾಡಿದ್ದರು. 4 ಪಂದ್ಯಗಳಲ್ಲಿ ಒಟ್ಟು 25 ವಿಕೆಟ್‌ಗಳನ್ನು ಪಡೆದಿದ್ದರು. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಎರಡಕ್ಕಿಂತಲೂ ಹೆಚ್ಚು ಬಾರಿ ಅಶ್ವಿನ್, 25ಕ್ಕಿಂತ ಅಧಿಕ ವಿಕೆಟ್ ಕಬಳಿಸಿದ್ದು, 2013ರಲ್ಲೂ ಅಶ್ವಿನ್ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 29 ವಿಕೆಟ್ ಪಡೆದಿದ್ದರು.ಅಶ್ವಿನ್ ಇದುವರೆಗೆ ಟೀಂ ಇಂಡಿಯಾ ಪರ 92 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.
ಈ ಪಂದ್ಯಗಳಲ್ಲಿ ಒಟ್ಟು 474 ವಿಕೆಟ್ ಪಡೆದಿದ್ದಾರೆ. ಟೆಸ್ಟ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಇವರು. ಟೀಂ ಇಂಡಿಯಾ ಪರ 113 ಏಕದಿನ ಹಾಗೂ 65 ಟಿ20 ಪಂದ್ಯಗಳನ್ನೂ ಆಡಿದ್ದಾರೆ. ಏಕದಿನದಲ್ಲಿ 151 ಮತ್ತು ಟಿ20ಯಲ್ಲಿ 72 ವಿಕೆಟ್ ಪಡೆದಿದ್ದಾರೆ.