alex Certify ಇದು ರಿವರ್ಸ್ ಗೇರ್ ಸರ್ಕಾರ; ಎಲ್ಲವನ್ನೂ ಬದಲಾಯಿಸುತ್ತೇವೆ ಎಂಬುದು ದುರಹಂಕಾರದ ಮಾತು; ಮಾಜಿ ಸಿಎಂ ಬೊಮ್ಮಾಯಿ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ರಿವರ್ಸ್ ಗೇರ್ ಸರ್ಕಾರ; ಎಲ್ಲವನ್ನೂ ಬದಲಾಯಿಸುತ್ತೇವೆ ಎಂಬುದು ದುರಹಂಕಾರದ ಮಾತು; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂಬುದು ಗೊತ್ತಿದೆ. ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಅಧಿಕಾರ ಇದೆ. ಏನು ಮಾಡ್ತಾರೆ ನೋಡೋಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಎಲ್ಲವನ್ನೂ ಬದಲಾಯಿಸುತ್ತೇವೆ ಎಂಬುದು ದುರಹಂಕಾರದ ಮಾತು. ಇದು ರಿವರ್ಸ್ ಗೇರ್ ಸರ್ಕಾರ. ಗ್ಯಾರಂಟಿಯಲ್ಲಿಯೂ ಕಾಂಗ್ರೆಸ್ ಸರ್ಕಾರ ರಿವರ್ಸ್ ಹೋಗುತ್ತಿದೆ. ಸೇಡಿನ ಕ್ರಮ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜನರಿಗೆ ಎಲ್ಲವೂ ಕೂಡಲೇ ಅರ್ಥವಾಗುತ್ತದೆ. ಸಾರ್ವತ್ರಿಕವಾಗಿ ಜನರಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ರಾಜಕೀಯವಾಗಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...