ನವದೆಹಲಿ: ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ, ಒಳಜಗಳಗಳಾಗಲಿ ಇಲ್ಲ. ನಮ್ಮ ಉದ್ದೇಶ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿದೆ ಹೊರತು ಸಿಎಂ ಸ್ಥಾನದ ಬಗ್ಗೆ ಚರ್ಚೆ ನಡೆಸುವಂತ ಸಮಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್: ಮತ್ತೆ ಏರಿಕೆಯಾಗಲಿದೆ ʼಮಾರುತಿʼ ಬೆಲೆ
ನವದೆಹಲಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಕಳೆದ ಒಂದು ವರ್ಷದಿಂದ ದೆಹಲಿಗೆ ಭೇಟಿ ನೀಡಿರಲಿಲ್ಲ ಹೀಗಾಗಿ ಬಂದಿದ್ದೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಒಳ ಜಗಳಗಳಿಲ್ಲ. ಸಿಎಂ ಸ್ಥಾನದ ಬಗ್ಗೆ ನಮ್ಮ ಪಕ್ಷದವರು ಮಾತನಾಡುವ ಪ್ರಶ್ನೆಯೇ ಇಲ್ಲ. ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳನ್ನು ಮೊದಲು ಗೆಲ್ಲಬೇಕಿದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಹೊರತು ಸಿಎಂ ಸ್ಥಾನಕ್ಕೆ ಯಾರು ಏರುತ್ತಾರೆ ಎಂಬ ಬಗ್ಗೆ ಚರ್ಚೆ ಮಾಡುವ ಸಮಯವಲ್ಲ ಎಂದರು.
ಅಲೋಪಥಿ ಔಷಧಿ ನೀಡಲು ಆಯುರ್ವೇದ ವೈದ್ಯರಿಗೆ ಗ್ರೀನ್ ಸಿಗ್ನಲ್: ಉತ್ತರಾಖಂಡ್ ಸರ್ಕಾರದಿಂದ ಮಹತ್ವದ ನಿರ್ಧಾರ
ಅಷ್ಟಕ್ಕೂ ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಖಾಲಿಯಿಲ್ಲದಿರುವ ಸ್ಥಾನದ ಬಗ್ಗೆ ನಮಗೇಕೆ ಪೈಪೋಟಿ? ನಮ್ಮಲ್ಲಿ ಯಾವ ಗುಂಪುಗಾರಿಕೆಯೂ ಇಲ್ಲ. ಗುಂಪುಗಾರಿಕೆಗೆ ಅವಕಾಶವನ್ನೂ ನೀಡಲ್ಲ. ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಕೆಲ ಬದಲಾವಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಬೇಕಿದೆ ಎಂದು ಹೇಳಿದರು.