ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರಾಜ್ಯದಲ್ಲಿ ಜಾರಿಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಕ್ರಮವಾಗಿ ಜಾನುವಾರು ಹತ್ಯೆ ಮಾಡಿದ್ದ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಈ ಕುರಿತಂತೆ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್ ಆದೇಶ ಹೊರಡಿಸಿದ್ದು, ವಿವಿಧ ಮೂರು ಸ್ಥಳಗಳಲ್ಲಿ ಜಾನುವಾರು ಹತ್ಯೆ ನಡೆದ ಘಟನೆಗೆ ಸಂಬಂಧಿಸಿದಂತೆ ಜಾಗದ ಮಾಲೀಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸಿದ್ದಾರೆ.
ಜಾನುವಾರು ಹತ್ಯೆಗೆ ಸಂಬಂಧಿಸಿದಂತೆ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಆರೋಪ ಸಾಬೀತಾದರೆ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿ ಸರ್ಕಾರದ ವಶದಲ್ಲೇ ಮುಂದುವರೆಯಲಿದೆ ಎಂದು ಹೇಳಲಾಗಿದೆ.