alex Certify ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಕರ್ನಾಟಕದಲ್ಲಿ ಅಭಿಮಾನಿಗಳ ದಂಡನ್ನೇ ಹೊಂದಿರುವ ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಪ್ರಾಣಿಗಳ ಬಗ್ಗೆ ಹೆಚ್ಚಿನ ಒಲವು ತೋರುವ ದರ್ಶನ್ ತಮ್ಮ ಕ್ಯಾಮೆರಾದಲ್ಲಿ ತೆಗೆದ ಪ್ರಾಣಿಗಳ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಇತ್ತೀಚೆಗೆ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯಲು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ಸಾಕಷ್ಟು ನಟ ನಟಿಯರು ಸೇರಿದಂತೆ ಹಲವಾರು ಜನರು ಪ್ರಾಣಿಗಳನ್ನು ದತ್ತು ಪಡೆದರು.

ಅಭಿಮಾನಿ ಜೊತೆ ಸ್ಕೂಟರ್​ ಏರಿ ʼಜಾಲಿ ರೈಡ್ʼ​ ಮಾಡಿದ ರಾಖಿ

ನಟ ದರ್ಶನ್ ಇದೀಗ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋವರ್ಸ್ ಗಳನ್ನು ಪಡೆದುಕೊಂಡಿದ್ದಾರೆ. ಈ ಸಂತಸವನ್ನು ದರ್ಶನ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಎಲ್ಲಾ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಸಿನಿ ರಸಿಕರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ಸದಾ ಹೀಗೆ ಇರಲಿ ನಿಮ್ಮ ಪ್ರೀತಿಗೆ ಸದಾ ಚಿರ‍‌ರುಣಿ ನಿಮ್ಮ ದಾಸ ದರ್ಶನ್ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...