alex Certify ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ದೊಡ್ಡಬಳ್ಳಾಪರ : ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊನೆಗೆ ತಾನೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾಳೆ. ಈ ಸಂದರ್ಭದಲ್ಲಿ ಮಹಿಳೆ ತನ್ನ ಮಕ್ಕಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಘಟನೆ ನಡೆಯುತ್ತಿದ್ದಂತೆ ಇದನ್ನು ಕಂಡ ಅಕ್ಕ-ಪಕ್ಕದ ಮನೆಯವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ.

ಸಂಧ್ಯಾ(33) ಹಾಗೂ 2 ವರ್ಷದ, 4 ವರ್ಷದ ಮಕ್ಕಳು ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿಯಂತೆ ಮನೆಯಲ್ಲಿ ಯಾವುದೇ ಕೌಟುಂಬಿಕ ಕಲಹ ಇರಲಿಲ್ಲ. ಸಂಧ್ಯಾ, ಪತಿ ಹಾಗೂ ಅತ್ತೆ-ಮಾವರೊಂದಿಗೆ ಚೆನ್ನಾಗಿಯೇ ಇದ್ದರು. ಆ ಮನೆಯಲ್ಲಿ ಯಾವುದೇ ಜಗಳ ಕೂಡ ನಡೆಯುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...