alex Certify ಇಲ್ಲಿದೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೊಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೊಂದು ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸೆಪ್ಟೆಂಬರ್ 19 ರಿಂದ ನಡೆಸಲು ಉದ್ದೇಶಿಸಿದ್ದ ಮಧ್ಯವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಕುರಿತಂತೆ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ದಸರಾ ರಜೆ ನಂತರ ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಶೀಘ್ರದಲ್ಲೇ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಕಾಲೇಜು ಹಂತದಲ್ಲಿ ನಡೆಸಬೇಕಾಗಿದ್ದ ಪರೀಕ್ಷೆ ಈಗಾಗಲೇ ವಿಳಂಬವಾಗಿರುವುದರಿಂದ ಎರಡೂ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಕಡಿಮೆ ಅವಧಿಯಲ್ಲಿ ಎದುರಿಸುವುದು ಕಷ್ಟವಾಗಲಿದೆ ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...