alex Certify ಈವರೆಗೆ 21,02,61,480 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್; ಒಂದೇ ದಿನದಲ್ಲಿ 13,993 ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈವರೆಗೆ 21,02,61,480 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್; ಒಂದೇ ದಿನದಲ್ಲಿ 13,993 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,993 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,77,387ಕ್ಕೆ ಏರಿಕೆಯಾಗಿದ

ಕಳೆದ 24 ಗಂಟೆಯಲ್ಲಿ 101 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,212 ಕ್ಕೆ ಏರಿಕೆಯಾಗಿದೆ.

ʼಆಯುಷ್ಮಾನ್​ ಭಾರತ್ʼ​ ಯೋಜನೆ ಫಲಾನುಭವಿಗಳಿಗೆ ಶುಭ ಸುದ್ದಿ: ಉಚಿತವಾಗಿ ಸಿಗಲಿದೆ ಅರ್ಹತಾ ಕಾರ್ಡ್

ಇನ್ನು ದೇಶದಲ್ಲಿ 1,43,127 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,78,048 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 10,307 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 7,86,618 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 21,02,61,480 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇನ್ನು ದೇಶದಲ್ಲಿ ಈವರೆಗೆ 1,07,15,204 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...