
ಚುನಾವಣಾ ಕಣದಿಂದ ಹಿಂದೆ ಸರಿಯುವ ತೀರ್ಮಾನವನ್ನು ಈಶ್ವರಪ್ಪನವರು ಕೈಗೊಂಡಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿಯುತ್ತಿದ್ದಂತೆ ಶಿವಮೊಗ್ಗದ ಅವರ ನಿವಾಸದ ಮುಂದೆ ಅಭಿಮಾನಿಗಳು ಜಮಾಯಿಸಿದ್ದಾರೆ.
ಹಲವರು ಕಣ್ಣೀರಿಟ್ಟಿದ್ದು ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುವಂತೆ ದುಂಬಾಲು ಬಿದ್ದಿದ್ದಾರೆ. ಅಲ್ಲದೆ ಬೇಕೇ ಬೇಕು ನ್ಯಾಯ ಬೇಕು ಎಂಬ ಘೋಷಣೆಗಳನ್ನು ಕೂಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಈಶ್ವರಪ್ಪನವರ ಮೇಲೆ ಒತ್ತಡ ಹೇರುತ್ತಿದ್ದಾರೆ.
