alex Certify ಈಶ್ವರಪ್ಪ ಹೇಳಿಕೆ ಖಂಡಿಸಿದ ಕಾಂಗ್ರೆಸ್; ಸದನದಲ್ಲಿ ರಾಷ್ಟ್ರ ಧ್ವಜ ಹಿಡಿದು ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಶ್ವರಪ್ಪ ಹೇಳಿಕೆ ಖಂಡಿಸಿದ ಕಾಂಗ್ರೆಸ್; ಸದನದಲ್ಲಿ ರಾಷ್ಟ್ರ ಧ್ವಜ ಹಿಡಿದು ಪ್ರತಿಭಟನೆ

ಕೆ.ಎಸ್.ಈಶ್ವರಪ್ಪ ವಿರುದ್ಧ ಇಂದು ಕಾಂಗ್ರೆಸ್ ನಾಯಕರು ತಿರುಗಿ ಬಿದ್ದಿದ್ದಾರೆ. ಕೆಂಪು ಕೋಟೆಯ ಮೇಲೆ ಭಗವಾಧ್ವಜ ಒಂದಲ್ಲಾ ಒಂದು ದಿನ ಹಾರಾಡಬಹುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದರು. ಇದು ಕಾಂಗ್ರೆಸ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿತ್ತು. ಇಂದು ಬೆಳಗ್ಗೆ ವಿಧಾನಸಭೆ ಕಲಾಪ ಆರಂಭದಿಂದಲೇ ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ರು.

ಈಶ್ವರಪ್ಪ ಅವರ ಹೇಳಿಕೆ ವಿರುದ್ಧ ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡೂ ಕಡೆ ವಿರೋಧ ವ್ಯಕ್ತಪಡಿಸುವಂತೆ ಕಾಂಗ್ರೆಸ್ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದರಂತೆಯೇ ಇಂದು ಕಲಾಪದಲ್ಲಿ ಇಡೀ ಕಾಂಗ್ರೆಸ್ ಪಡೆ ಈಶ್ವರಪ್ಪ ವಿರುದ್ಧ ಮುಗಿಬಿದ್ದಿತು. ಕೊನೆ ಕೊನೆಗೆ ಇದು ಏಕ ವಚನಕ್ಕೆ ತಿರುಗಿ, ಕಾಂಗ್ರೆಸ್ ಬಿಜೆಪಿ ಸದಸ್ಯರ ನಡುವಿನ ವಾಗ್ವಾದಕ್ಕೂ ಕಾರಣವಾಯ್ತು. ಸದನದಲ್ಲಿ ಗದ್ದಲ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಮಧ್ಯಾಹ್ನಕ್ಕೆ ಕಲಾಪವನ್ನು ಮುಂದೂಡಿದ್ರು.

ಮಧ್ಯಾಹ್ನದ ಮೇಲೆ ಆರಂಭವಾದ ಕಲಾಪದಲ್ಲೂ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಸದನದ ಬಾವಿಗಿಳಿದ ಕಾಂಗ್ರೆಸ್ ಶಾಸಕರು ಹಾಗೂ ನಾಯಕರು ತಮ್ಮ ಕೈಗಳಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ರು. ಕಾಂಗ್ರೆಸ್ ನಾಯಕರ ಈ ವರ್ತನೆಗೆ ಸಿಎಂ ಹಾಗೂ ಸ್ಪೀಕರ್ ಸೇರಿದಂತೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಸದನದಲ್ಲಿ ರಾಷ್ಟ್ರಧ್ವಜ ಹಿಡಿಯುವುದು ಸರಿಯಲ್ಲ. ನಿಮ್ಮ ಧರಣಿಗಾಗಿ ಧ್ವಜವನ್ನು ಬಳಸಿಕೊಳ್ಳ ಬಾರದು. ಇದೇನು ನಿಮ್ಮ ಪಕ್ಷದ ಧ್ವಜವಾ ಎಂದು ಪ್ರಶ್ನಿಸಿದ ಸ್ಪೀಕರ್ ಸದನದಲ್ಲಿ ಗದ್ದಲ ಹೆಚ್ಚಾಗುತ್ತಿದ್ದಂತೆ, ಕಲಾಪವನ್ನು ನಾಳೆಗೆ ಮುಂದೂಡಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...