ಅರಳಿ ಮರವನ್ನು ಹಿಂದೂಗಳು ದೇವರ ರೂಪದಲ್ಲಿ ಪೂಜಿಸುತ್ತಾರೆ. ಈ ಮರದ ಎಲೆ, ತೊಗಟೆ ಔಷಧೀಯ ಗುಣಗಳನ್ನು ಹೊಂದಿದೆ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಇದನ್ನು ಆಯುರ್ವೇದದ ಚಿಕಿತ್ಸೆಯಲ್ಲಿ ಬಳಸುತ್ತಾರೆ.
*ಇದು ಬಾಯಿಯ ಹುಣ್ಣನ್ನು ನಿವಾರಿಸುತ್ತದೆ. ಈ ಮರದ ತೊಗಟೆಯನ್ನು ನೀರಿನಲ್ಲಿ ಕುದಿಸಿ ತಣ್ಣಗಾಗಿಸಿ ದಿನಕ್ಕೆ ಕನಿಷ್ಠ 3 ಬಾರಿ ಬಾಯಿಯನ್ನು ವಾಶ್ ಮಾಡಿ.
* ತುಂಬಾ ಕೆಮ್ಮು ಇದ್ದಾಗ ಈ ಮರದ ತೊಗಟೆಯನ್ನು ನೀರಿನಲ್ಲಿ ಕುದಿಸಿ ಆ ನೀರಿನಿಂದ 3-4 ಬಾರಿ ಗಾರ್ಗ್ಲಿಂಗ್ ಮಾಡುವುದರಿಂದ ಕೆಮ್ಮು ನಿವಾರಣೆಯಾಗುತ್ತದೆ.
*ಈ ಮರದ ತೊಗಟೆಯನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಗಾಯಗಳಿಗೆ ಹಚ್ಚುವುದರಿಂದ ಗಾಯಗಳು ಶೀಘ್ರದಲ್ಲಿಯೇ ವಾಸಿಯಾಗುತ್ತವೆ.
*ನಿರಂತರವಾಗಿ ಬಿಕ್ಕಳಿಕೆ ಬರುತ್ತಿದ್ದರೆ ಈ ಮರದ ತೊಗಟೆಯನ್ನು ಬೆಂಕಿಯಲ್ಲಿ ಸುಟ್ಟು ಬೂದಿ ಮಾಡಿ ಆ ಬೂದಿಯನ್ನು ನೀರಿನಲ್ಲಿ ಮಿಕ್ಸ್ ಮಾಡಿ ಕುಡಿಯಿರಿ.