alex Certify ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನಬೇಡಿ; ಅವು ವಿಷದಂತಾಗುತ್ತವೆ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನಬೇಡಿ; ಅವು ವಿಷದಂತಾಗುತ್ತವೆ…..!

ಇಂದಿನ ಧಾವಂತದ ಬದುಕಿನಲ್ಲಿ ಎಲ್ಲರಿಗೂ ಸಮಯದ ಅಭಾವ. ತಾಜಾ ಆಹಾರವನ್ನು ಸೇವಿಸದೇ ಅದನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನುತ್ತಾರೆ. ಕೆಲವರು ಆಹಾರವನ್ನು ಫ್ರಿಡ್ಜ್‌ನಲ್ಲಿಟ್ಟು ಅದನ್ನು ಮತ್ತೆ ಬಿಸಿ ಮಾಡಿ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆದರೆ ಈ ರೀತಿ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಕೆಲವು ವಸ್ತುಗಳನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿಂದರೆ ವಿಷವಾಗುತ್ತದೆ.

ಆಲೂಗಡ್ಡೆ: ಆಲೂಗಡ್ಡೆಯನ್ನು ಪ್ರತಿ ತಿನಿಸುಗಳಲ್ಲಿಯೂ ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ಆಲೂಗೆಡ್ಡೆಯನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನಬಾರದು. ಏಕೆಂದರೆ ಆಲೂಗಡ್ಡೆಯನ್ನು ಮತ್ತೆ ಬಿಸಿ ಮಾಡಿ ತಿಂದಾಗ ಅದರಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ, ಇದು ನಿಮ್ಮ ಆರೋಗ್ಯಕ್ಕೆ ಹಾನಿ ಮಾಡುತ್ತದೆ.

ಮೊಟ್ಟೆ: ಮೊಟ್ಟೆಯನ್ನು ಅಪ್ಪಿತಪ್ಪಿಯೂ ಪದೇ ಪದೇ ಬಿಸಿ ಮಾಡಿ ತಿನ್ನಬಾರದು. ಏಕೆಂದರೆ ಮೊಟ್ಟೆಯಲ್ಲಿ ಸಾರಜನಕದ ಪ್ರಮಾಣ ಅಧಿಕವಾಗಿದ್ದು, ಬಿಸಿ ಮಾಡಿದಾಗ ಅದು ಸಾರಜನಕವನ್ನು ಉತ್ಪಾದಿಸಲು ಆರಂಭಿಸುತ್ತದೆ. ನೀವು ಮೊಟ್ಟೆಯನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿಂದರೆ ನಿಮಗೆ ಕ್ಯಾನ್ಸರ್ ಬರುವ ಅಪಾಯವಿದೆ.

ಅನ್ನ: ಪ್ರತಿ ಮನೆಯಲ್ಲೂ ಅನ್ನವನ್ನು ಸೇವಿಸುತ್ತಾರೆ. ಅನ್ನವನ್ನು ಫ್ರೆಶ್‌ ಆಗಿದ್ದಾಗ ಬಿಸಿಯಾಗಿಯೇ ಸೇವಿಸಬೇಕು. ತಣ್ಣಗಾದ ಬಳಿಕ ಅದನ್ನು ಮತ್ತೆ ಬಿಸಿ ಮಾಡಿ ಸೇವಿಸಬೇಡಿ. ಈ ರೀತಿ ಮಾಡಿದರೆ ಆಹಾರ ವಿಷವಾಗುವ ಅಪಾಯವಿರುತ್ತದೆ.

ಚಿಕನ್: ಚಿಕನ್‌ನಿಂದ ಮಾಡಿದ ತಿನಿಸುಗಳನ್ನು ಕೂಡ ಪದೇ ಪದೇ ಬಿಸಿ ಮಾಡಬೇಕು. ಆಗಾಗ ಬಿಸಿ ಮಾಡುವುದರಿಂದ ಅದರ ಪ್ರೋಟೀನ್ ನಾಶವಾಗುತ್ತದೆ. ಅದು ವಿಷಕಾರಿ ರೂಪವನ್ನು ಪಡೆಯಲು ಪ್ರಾರಂಭಿಸುತ್ತದೆ. ಅದಕ್ಕಾಗಿಯೇ ಚಿಕನ್ ಅನ್ನು ಮತ್ತೆ ಬಿಸಿ ಮಾಡಿ ತಿನ್ನಬೇಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...