ರಾಜ್ಯದಲ್ಲಿ ನಿರಂತರವಾಗಿ ಸುರಿದಿದ್ದ ಮಳೆ ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದು, ಈಗ ಮೂರು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇದೀಗ ಮಳೆ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದ್ದು, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದ್ದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.