alex Certify ಈ ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆ ಸುರಿಯುವ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆ ಸುರಿಯುವ ಸಾಧ್ಯತೆ

ರಾಜ್ಯದಲ್ಲಿ ನಿರಂತರವಾಗಿ ಸುರಿದಿದ್ದ ಮಳೆ ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದು, ಈಗ ಮೂರು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇದೀಗ ಮಳೆ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದ್ದು, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದ್ದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...