alex Certify ಈ ಬಾರಿಯೂ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರಾ HDK ? ಇಲ್ಲಿದೆ ಪುತ್ರ ನಿಖಿಲ್ ನೀಡಿದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಾರಿಯೂ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರಾ HDK ? ಇಲ್ಲಿದೆ ಪುತ್ರ ನಿಖಿಲ್ ನೀಡಿದ ಮಾಹಿತಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದರು. ನಂತರ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, ಈ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಕಣಕ್ಕಿಳಿದು ಗೆಲುವು ಸಾಧಿಸಿದ್ದರು.

ಅನಿತಾ ಕುಮಾರಸ್ವಾಮಿಯವರು ಈಗ ರಾಮನಗರ ಕ್ಷೇತ್ರದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಇದರ ಮಧ್ಯೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಕುಮಾರಸ್ವಾಮಿ ಮತ್ತೆ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರಾ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು.

ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಕುರಿತಂತೆ ಸ್ಪಷ್ಟನೆ ನೀಡಿದ್ದು, ಕುಮಾರಸ್ವಾಮಿಯವರು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಿಲ್ಲ. ಅವರು ಚನ್ನಪಟ್ಟಣದಿಂದಲೇ ಈ ಬಾರಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾರ್ಯಕರ್ತರ ಮಾತಿಗೆ ಬೆಲೆಕೊಟ್ಟು ಎರಡು ಕಡೆ ಸ್ಪರ್ಧೆ ಮಾಡಿದ್ದರು. ಆದರೆ ಈ ಬಾರಿ ಅಂತಹ ಯಾವುದೇ ಪ್ರಯೋಗ ಮಾಡುವುದಿಲ್ಲ ಎಂದು ನಿಖಿಲ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...