alex Certify ಈ ಬಾರಿ ಬೆಳಗಾವಿಯಲ್ಲಿ ರಾಜ್ಯೋತ್ಸವ ವಿಶೇಷ; ಬರುವವರಿಗೆಲ್ಲಾ ಹೋಳಿಗೆ ಊಟ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಾರಿ ಬೆಳಗಾವಿಯಲ್ಲಿ ರಾಜ್ಯೋತ್ಸವ ವಿಶೇಷ; ಬರುವವರಿಗೆಲ್ಲಾ ಹೋಳಿಗೆ ಊಟ….!

ಬೆಳಗಾವಿ- ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ಇದೀಗ ಸಿದ್ದತೆಗಳು ನಡೆದಿವೆ. ಮೂರು ವರ್ಷಗಳ ಬಳಿಕ ಇಲ್ಲಿ ಕನ್ನಡ ರಾಜ್ಯೋತ್ಸವ ನಡೆಯುತ್ತಿರೋದ್ರಿಂದ ಅದ್ಧೂರಿಯಾಗಿ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಇದಕ್ಕಾಗಿ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹುಕ್ಕೇರಿ ಹಿರೇಮಠ ವತಿಯಿಂದ 1 ಲಕ್ಷ ಹೋಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

ಈ ವಿಚಾರವಾಗಿ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಈ ಬಾರೀ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಣೆ ಮಾಡಲು ಇಚ್ಚಿಸಿದ್ದೇವೆ‌. ಅದರಂತೆ ಒಬ್ಬರಿಗೆ ಎರಡು ಹೋಳಿಗೆ ಪ್ರಕಾರ ಒಂದು ಲಕ್ಷ ಹೋಳಿಗೆ ಮಾಡಿಸಲು ತಯಾರಿ ಮಾಡಿದ್ದೇವೆ. ಹೋಳಿಗೆ ಜೊತೆಗೆ ಊಟದಲ್ಲಿ ಬದನೆಕಾಯಿ ಪಲ್ಯ, ಅನ್ನ-ಸಾಂಬಾರು ಇರುತ್ತದೆ. ಇದಕ್ಕಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿಯ 200 ಬಾಣಸಿಗರು ಬರಲಿದ್ದಾರೆ. 150 ಜನ ಹೆಣ್ಣುಮಕ್ಕಳಿಂದ ಹೋಳಿಗೆ, 50 ಪುರುಷರಿಂದ ಅನ್ನ-ಸಾಂಬರು, ಕಾಯಿಪಲ್ಯ ತಯಾರಿಸಲಾಗುತ್ತದೆ ಎಂದರು.

ಇನ್ನು, ಹೋಳಿಗೆ ದಾಸೋಹಕ್ಕೆ ಹಿರಿಯ ನಟ ಸಾಯಿಕುಮಾರ್ ಹಾಗೂ ಸಚಿವ ಗೋವಿಂದ ಕಾರಜೋಳ ಅವರು ಚಾಲನೆ ನೀಡಲಿದ್ದಾರೆ. ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಯಿಂದಲೇ ಹೋಳಿಗೆ ದಾಸೋಹ ಪ್ರಾರಂಭ ಆಗಲಿದೆಯಂತೆ. ಹೀಗಾಗಿ ಬೆಳಗಾವಿಯಲ್ಲಿ ನಡೆಯುವ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...