ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನ ನಿಲ್ದಾಣ ಕಾಮಗಾರಿ ಅತಿವೇಗವಾಗಿ ನಡೆಯುತ್ತಿದ್ದು ಈ ವರ್ಷಾಂತ್ಯದೊಳಗೆ ಇಲ್ಲಿಂದ ಪ್ರಮುಖ ನಗರಗಳಿಗೆ ವಿಮಾನಸೇವೆ ಆರಂಭವಾಗುವ ನಿರೀಕ್ಷೆ ಇದೆ.
ಸೋಮವಾರದಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಈ ಮಾಹಿತಿ ನೀಡಿದ್ದಾರೆ.
ಆರೋಗ್ಯಕರ ಕ್ಯಾರೆಟ್ ಬಾತ್ ಮಾಡುವ ವಿಧಾನ
400 ರಿಂದ 450 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು, ಈ ಮೊದಲೇ ಭೂಮಿಯನ್ನು ಖರೀದಿಸಿದ್ದ ಕಾರಣ ಕಡಿಮೆ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದರು.