
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂತಹ ಭ್ರಷ್ಟ ಸರ್ಕಾರವನ್ನು ನಾನೆಂದು ನೋಡಿರಲಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರಲ್ಲದೆ ಹಣವಿಲ್ಲದೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ ಎಂದು ಕಿಡಿಕಾರಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಇವರುಗಳ ಭ್ರಷ್ಟಾಚಾರದ ಕುರಿತು ತನಿಖೆ ನಡೆಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.