ಉಂಡೆ ಕೊಬ್ಬರಿ ಮಾರಾಟಗಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಬೆಂಬಲ ಬೆಲೆ ಯೋಜನೆ ಅಡಿ ಕೊಬ್ಬರಿ ಖರೀದಿ ಮಾಡಲು ನಿಗದಿಯಾಗಿದ್ದ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿ ಗುಣಮಟ್ಟದ ಉಂಡೆ ಕೊಬ್ಬರಿ ಮಾರಾಟಕ್ಕೆ ಹೆಸರು ನೋಂದಣಿ ಮಾಡುವ ಅಂತಿಮ ದಿನಾಂಕವನ್ನು ಮೇ 30ರವರೆಗೆ ವಿಸ್ತರಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ.
ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ತೀವ್ರ ಕುಸಿತ ಕಂಡಿರುವ ಕಾರಣ ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್ ಗೆ 11,750 ರೂಪಾಯಿಗಳಂತೆ ಗರಿಷ್ಠ 54,750 ಟನ್ ಕೊಬ್ಬರಿ ಖರೀದಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕೆ ಈ ಮೊದಲು ಮಾರ್ಚ್ 13ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು.