ಉಕ್ರೇನ್ – ರಷ್ಯಾ ನಡುವಿನ ಯುದ್ಧದ ಮಧ್ಯೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಕುರಿತು ಪ್ರಧಾನಿ ಮೋದಿಯಿಂದ ನಿನ್ನೆ ಉನ್ನತ ಮಟ್ಟದ ಸಭೆ ನಡೆದಿದೆ.
ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಕೇಂದ್ರ ಸಚಿವರು ಉಕ್ರೇನ್ನ ನೆರೆ ದೇಶಗಳಿಗೆ ತೆರಳಬಹುದು ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ಪ್ರಸ್ತುತ 16 ಸಾವಿರ ಮಂದಿ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಇವರೆಲ್ಲ ಬಂಕರ್ಗಳು, ಬಾಂಬ್ ಶೆಲ್ಟರ್ಗಳು ಹಾಗೂ ಹಾಸ್ಟೆಲ್ನ ನೆಲಮಾಳಿಗೆಗಳಲ್ಲಿ ಅವಿತುಕೊಂಡಿದ್ದಾರೆ ಎನ್ನಲಾಗಿದೆ.
ವಿರೋಧ ಪಕ್ಷಗಳು ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಕಷ್ಟ ಅನುಭವಿಸುತ್ತಿರುವ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ಉಕ್ರೇನ್ನಿಂದ ವಿದ್ಯಾರ್ಥಿಗಳನ್ನು ಮರಳಿ ತರಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಕ್ರೋಶ ಹೊರ ಹಾಕುತ್ತಲೇ ಇದೆ.