ಭಟ್ಕಳ : ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮೂವರನ್ನು ವಶಕ್ಕೆ ಪಡೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಉಮರ್ ಸ್ಟ್ರೀಟ್, ತೆಂಗಿನ ಗುಂಡಿ ಹಾಗೂ ಸಾಗರ ರಸ್ತೆಯಲ್ಲಿರುವ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದೆ.
ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಮೀನ್ ಜುವೇಬ್, ಜವಾದ್ ಹಾಗೂ ದುಬೈನಲ್ಲಿ ಬಂಧನಕ್ಕೀಡಾಗಿದ್ದ ಶಂಕಿತ ಉಗ್ರನ ಸಹೋದರನೋರ್ವನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.