ಬಿಜೆಪಿ ನಾಯಕ ಪುಷ್ಕರ್ ಸಿಂಗ್ ಧಾಮಿ ಸತತ ಎರಡನೇ ಅವಧಿಗೆ ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಆಯ್ಕೆಗೊಂಡಿದ್ದಾರೆ. ಇಂದು ಉತ್ತರಾಖಂಡ್ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಿಜೆಪಿ ನಾಯಕರು ಈ ಅಧಿಕೃತ ಘೋಷಣೆಯನ್ನು ಮಾಡಿದ್ದಾರೆ.
ಡೆಹ್ರಾಡೂನ್ನ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪುಷ್ಕರ್ ಸಿಂಗ್ ಧಾಮಿಯನ್ನು ಮತ್ತೊಮ್ಮೆ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್, ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗಿಯಾಗಿದ್ದರು.