ರಾಯಚೂರು: ಉತ್ತರ ಕರ್ನಾಟಕ ಭಾಗದವರನ್ನು ಉಪಮುಖ್ಯಮಂತ್ರಿ ಮಾಡಲಿ ಎಂದು ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಉತ್ತರ ಕರ್ನಾಟಕ ಭಾಗದ ಜನತೆಯ ಕೊಡುಗೆಯೂ ಅಪಾರವಾಗಿದೆ. ಕಾಂಗ್ರೆಸ್ ಪಕ್ಷ ಮುಂದಿನ 5 ವರ್ಷ ಉತ್ತಮ ಆಡಳಿತ ನೀಡಲಿ ಎಂದರು.
ಉತ್ತರ ಕರ್ನಾಟಕ ಭಾಗದವರಾದ ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಬೇಕು. ಜಾತಿ ಆಧಾರದ ಮೇಲೆ ಸ್ಥಾನಮಾನ ಕೇಳುತ್ತಿಲ್ಲ. ಅರ್ಹತೆಯ ಆಧಾರದ ಮೇಲೆ ಕೇಳುತ್ತಿದ್ದೇವೆ. ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.