alex Certify ಉತ್ತರ ಕರ್ನಾಟಕಕ್ಕೆ ಡಿಸಿಎಂ ಸ್ಥಾನಕ್ಕೆ ಒತ್ತಾಯ; ಈಶ್ವರ ಖಂಡ್ರೆಯನ್ನು ಉಪಮುಖ್ಯಮಂತ್ರಿ ಮಾಡುವಂತೆ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕಕ್ಕೆ ಡಿಸಿಎಂ ಸ್ಥಾನಕ್ಕೆ ಒತ್ತಾಯ; ಈಶ್ವರ ಖಂಡ್ರೆಯನ್ನು ಉಪಮುಖ್ಯಮಂತ್ರಿ ಮಾಡುವಂತೆ ಒತ್ತಾಯ

ರಾಯಚೂರು: ಉತ್ತರ ಕರ್ನಾಟಕ ಭಾಗದವರನ್ನು ಉಪಮುಖ್ಯಮಂತ್ರಿ ಮಾಡಲಿ ಎಂದು ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಉತ್ತರ ಕರ್ನಾಟಕ ಭಾಗದ ಜನತೆಯ ಕೊಡುಗೆಯೂ ಅಪಾರವಾಗಿದೆ. ಕಾಂಗ್ರೆಸ್ ಪಕ್ಷ ಮುಂದಿನ 5 ವರ್ಷ ಉತ್ತಮ ಆಡಳಿತ ನೀಡಲಿ ಎಂದರು.

ಉತ್ತರ ಕರ್ನಾಟಕ ಭಾಗದವರಾದ ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಬೇಕು. ಜಾತಿ ಆಧಾರದ ಮೇಲೆ ಸ್ಥಾನಮಾನ ಕೇಳುತ್ತಿಲ್ಲ. ಅರ್ಹತೆಯ ಆಧಾರದ ಮೇಲೆ ಕೇಳುತ್ತಿದ್ದೇವೆ. ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...