ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆದಿದ್ದು, ಗೆಲುವಿಗಾಗಿ ಬಿಜೆಪಿ, ಸಮಾಜವಾದಿ ಪಕ್ಷ, ಕಾಂಗ್ರೆಸ್, ಬಹುಜನ ಸಮಾಜ ಪಕ್ಷಗಳು ಭಾರಿ ಹಣಾಹಣಿ ನಡೆಸುತ್ತಿವೆ. ವಿವಿಧ ಪಕ್ಷಗಳೊಂದಿಗೆ ಮೈತ್ರಿ ರಾಜಕಾರಣ ನಡೆಯುತ್ತಿರುವ ಮಧ್ಯೆ ಮತ್ತೊಂದು ರೀತಿಯ ‘ಹೊಂದಾಣಿಕೆ’ ಕೂಡ ಮುಂದುವರೆದಿದೆ.
ಇದಕ್ಕೆ ಉದಾಹರಣೆ ಎಂಬಂತೆ ವಿಧಾನಸಭಾ ಚುನಾವಣೆ ಮತದಾನಕ್ಕೂ ಮುನ್ನ ಕಾಂಗ್ರೆಸ್ ಮಹತ್ವದ ನಿರ್ಧಾರವೊಂದನ್ನು ಕೈಗೊಂಡು ಅಚ್ಚರಿ ಮೂಡಿಸಿದೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕಣಕ್ಕಿಳಿದಿರುವ ಮೈನ್ಪುರಿಯ ಕರ್ಹಾಲ್ ಹಾಗೂ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಕಣಕ್ಕಿಳಿದಿರುವ ಇಟವಾದ ಜಸ್ವಂತ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣದಿಂದ ಹಿಂಪಡೆಯಲಾಗಿದೆ. ಈ ಮೂಲಕ ಇವರಿಬ್ಬರ ಗೆಲುವಿಗೆ ಕಾಂಗ್ರೆಸ್ ಪರೋಕ್ಷವಾಗಿ ಕೈಜೋಡಿಸಿದೆ.
ಮೋದಿಯವರ ರೂಪದಲ್ಲಿ ಸ್ವಾಮಿ ವಿವೇಕಾನಂದರ ಪುನರ್ಜನ್ಮವಾಗಿದೆ: ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪ್ರಧಾನ್, ಈ ಹಿಂದೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ ಹೀಗಾಗಿಯೇ ನಾವು ಈ ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಬಿಜೆಪಿ ಮುಖಂಡರು ಮಾತ್ರ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪರಸ್ಪರ ಕೈ ಜೋಡಿಸಿವೆ ಎಂದು ಆರೋಪಿಸಿದ್ದಾರೆ.