alex Certify ಉದ್ಯೋಗಕಾಂಕ್ಷಿಗಳಿಗೆ ಬಂಪರ್: ಗ್ರಾಮೀಣ ಬ್ಯಾಂಕ್ ಗಳ 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಕಾಂಕ್ಷಿಗಳಿಗೆ ಬಂಪರ್: ಗ್ರಾಮೀಣ ಬ್ಯಾಂಕ್ ಗಳ 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಎರಡು ಬ್ಯಾಂಕುಗಳು ಸೇರಿದಂತೆ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳಿಗೆ ನೇಮಕಾತಿ ನಡೆಸಲು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಸ್ಪರ್ಧಾತ್ಮಕ ಪರೀಕ್ಷೆ ಅಧಿಸೂಚನೆ ಪ್ರಕಟಿಸಿದೆ.

ಒಟ್ಟು 8,106 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಈ ಪೈಕಿ ರಾಜ್ಯದ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕುಗಳ 832 ಹುದ್ದೆಗಳೂ ಇವೆ. ಕಳೆದ ಬಾರಿಯಂತೆ ಈ ಬಾರಿಯೂ ಕನ್ನಡ ಹಾಗೂ ಕೊಂಕಣಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದರೆ ಕನ್ನಡಿಗರ ಬಹು ನಿರೀಕ್ಷಿತ ಕನ್ನಡದಲ್ಲಿಯೇ ಬ್ಯಾಂಕಿಂಗ್ ಪರೀಕ್ಷೆ ಬರೆಯುವ ಒತ್ತಾಯ ಈ ಬಾರಿಯೂ ಕೈಗೂಡಿಲ್ಲ.

ಮಂಗಳವಾರದಿಂದಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 27ರವರೆಗೆ ಇದಕ್ಕೆ ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ವೆಬ್ ಸೈಟ್ ಗೆ ಭೇಟಿ ನೀಡಿ ಪಡೆದುಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...