alex Certify ಉದ್ಯೋಗದ ನಿರೀಕ್ಷೆಯಲ್ಲಿರುವ ಶಿವಮೊಗ್ಗ ಜಿಲ್ಲೆ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿರುವ ಶಿವಮೊಗ್ಗ ಜಿಲ್ಲೆ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜೂನ್ 30ರಂದು ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಡಿವಿಎಸ್ ಕಾಲೇಜ್ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಿವಿಎಸ್ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು ಕೌಶಲ್ಯಾಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಈ ಉದ್ಯೋಗ ಮೇಳ ನಡೆಯಲಿದ್ದು, ಸುಮಾರು 20ಕ್ಕೂ ಹೆಚ್ಚು ಸ್ಥಳೀಯ ಕಂಪನಿಗಳು ಇದರಲ್ಲಿ ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ.ಯಿಂದ ಮೇಲ್ಪಟ್ಟು, ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳು ಕೂಡ ಇದರಲ್ಲಿ ಭಾಗವಹಿಸಬಹುದಾಗಿದೆ ಎಂದರು.

ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ನೀಡಲಾಗುವುದು. ಈ ಉದ್ಯೋಗ ಮೇಳಕ್ಕೆ ಆನ್‍ಲೈನ್ ನೋಂದಣಿಗೆ ಅವಕಾಶವಿದೆ. ಅಲ್ಲದೆ ಸ್ಥಳದಲ್ಲಿಯೂ ಕೂಡ ನೋಂದಣಿ ಮಾಡಿಕೊಳ್ಳಬಹುದು. ನಮ್ಮ ಸಂಘದ ವತಿಯಿಂದ ಜಿಲ್ಲೆಯಲ್ಲಿ ಉದ್ಯೋಗ ನೀಡಲು ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ. ಇಲ್ಲಿ ಆಯ್ಕೆ ಆಗದಿದ್ದವರಿಗೆ ಕೌಶಲ್ಯ ತರಬೇತಿಯನ್ನು ಕೂಡ ನೀಡಲು ಸಂಘ ಚಿಂತನೆ ಮಾಡಿದೆ ಎಂದರು. ಹೆಚ್ಚಿನ ವಿವರ ಮತ್ತು ಮಾಹಿತಿಗಾಗಿ ಮೊ: 9448122646, 9880044040 ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...