alex Certify ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್; ಸಿಎಆರ್ ನಲ್ಲಿ ನೇಮಕಕ್ಕೆ ಪ್ರಸ್ತಾವನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್; ಸಿಎಆರ್ ನಲ್ಲಿ ನೇಮಕಕ್ಕೆ ಪ್ರಸ್ತಾವನೆ

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಶುಭ ಸುದ್ಧಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ನಗರ ಸಶಸ್ತ್ರ ಪಡೆ (ಸಿಎಆರ್) ಗೆ ಮಹಿಳೆಯರನ್ನು ನೇಮಕ ಮಾಡಿಕೊಳ್ಳಲು ಪ್ರಸ್ತಾವನೆ ಸಿದ್ಧವಾಗಿದ್ದು, ಮುಂಬರುವ ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.

ಮಂಗಳವಾರದಂದು ವಿಧಾನಸೌಧದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನಾ ಸಭೆ ನಡೆಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಇಲಾಖೆಯನ್ನು ಆಧುನೀಕರಣಗೊಳಿಸುವ ಹಾಗೂ ಹೊಸ ಕಾಯಕಲ್ಪ ನೀಡುವ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸಿಎಆರ್ ಹಾಗೂ ಡಿಎಆರ್‌ ಗಳಲ್ಲಿ ಮಹಿಳೆಯರ ನೇಮಕ ಕುರಿತಂತೆ ಪ್ರಸ್ತಾವನೆಯನ್ನು ಅಂತಿಮಗೊಳಿಸಲಾಗಿದ್ದು, ಇದರ ಜೊತೆಗೆ ಪೊಲೀಸ್ ವಸತಿ ಯೋಜನೆಗಳನ್ನು ತ್ವರಿತಗೊಳಿಸುವ ಕುರಿತಂತೆ ಹೆಚ್ಚಿನ ಅನುದಾನ ಕೋರುವ ಪ್ರಸ್ತಾವನೆಯನ್ನು ಸಹ ಸಿದ್ಧಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...