alex Certify ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್; 50ಕ್ಕೂ ಅಧಿಕ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್; 50ಕ್ಕೂ ಅಧಿಕ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಿದ್ದು, ನವೆಂಬರ್ 18 ಅಂತಿಮ ದಿನಾಂಕವಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ನಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಗಣಿತ, ಪ್ಯೂರ್ ಮ್ಯಾಥೆಮ್ಯಾಟಿಕ್ಸ್, ಸ್ಟ್ಯಾಟಿಸ್ಟಿಕ್ಸ್, ಅಪ್ಲೈಡ್ ಸ್ಟ್ಯಾಟಿಸ್ಟಿಕ್ಸ್, ಸ್ಟ್ಯಾಟಿಸ್ಟಿಕ್ಸ್ ಜೊತೆಗೆ ಅರ್ಥಶಾಸ್ತ್ರ, ಕ್ವಾಂಟಿಟೇಟಿವ್ ತಂತ್ರಗಳು, ಪ್ಯೂರ್ ಎಕನಾಮಿಕ್ಸ್, ಪ್ಯೂರ್ ಮ್ಯಾಥಮ್ಯಾಟಿಕ್ಸ್, ಅರ್ಥಶಾಸ್ತ್ರ ಅಥವಾ ಕಂಪ್ಯೂಟರ್ ಸೈನ್ಸ್ ಯಾವುದಾದರೂ ಒಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ, ಅರ್ಜಿ ಸಲ್ಲಿಕೆ, ಪರೀಕ್ಷಾ ಪಠ್ಯಕ್ರಮ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ http//kpsc.kar.nic.in ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...