10 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಜೂನ್ ತಿಂಗಳಿನಲ್ಲಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇದೀಗ ದೀಪಾವಳಿಗೂ ಮುನ್ನವೇ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್ ನ್ಯೂಸ್ ನೀಡಿದ್ದಾರೆ.
ಅಕ್ಟೋಬರ್ 22ರ ನಾಳೆ 75,000 ಮಂದಿಗೆ ನೇಮಕಾತಿ ಪತ್ರ ನೀಡಲಾಗುತ್ತಿದ್ದು, ಇದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ವಿತರಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಲಿರುವ ನರೇಂದ್ರ ಮೋದಿಯವರು ಸಾಂಕೇತಿಕವಾಗಿ ನೇಮಕಾತಿ ಪತ್ರ ನೀಡಲಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಗೆ ಖಾಲಿ ಇರುವ ಹುದ್ದೆಗಳನ್ನು ಗುರುತಿಸಲು ಸೂಚಿಸಲಾಗಿದ್ದು, ಒಟ್ಟು 10 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಸಿದ್ಧತೆ ನಡೆಸಲಾಗಿದೆ. ಇದೀಗ ಮೊದಲ ಹಂತದಲ್ಲಿ 75,000 ಮಂದಿಗೆ ನೇಮಕಾತಿ ಪತ್ರ ನೀಡಲಾಗುತ್ತಿದ್ದು, ಇವರುಗಳು ಗೃಹ, ರಕ್ಷಣೆ, ರೈಲ್ವೆ ಮೊದಲಾದ ಇಲಾಖೆಗಳಿಗೆ ಆಯ್ಕೆಯಾದವರಾಗಿದ್ದಾರೆ.