alex Certify ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸಾವಿರಕ್ಕೂ ಅಧಿಕ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಈಗ ಅಧಿಸೂಚನೆ ಹೊರಡಿಸಲಾಗಿದೆ.

ಬುಧವಾರದಂದು ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು 1137 ಹುದ್ದೆಗಳ ಪೈಕಿ 683 ಪುರುಷ, 229 ಮಹಿಳೆ, 22 ಪುರುಷ ತೃತೀಯ ಲಿಂಗಿ, 10 ಮಹಿಳಾ ತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ 19 ವರ್ಷ ತುಂಬಿದ ಅಭ್ಯರ್ಥಿಗಳು ಅಕ್ಟೋಬರ್ 20 ರ ಬೆಳಿಗ್ಗೆ 10 ಗಂಟೆಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 21‌ ರ ಸಂಜೆ 6:00 ಗಂಟೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವಾಗಿದೆ.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://ksp-recruitment.in ವೀಕ್ಷಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...