alex Certify ʼಉದ್ಯೋಗಾಕಾಂಕ್ಷಿʼಗಳಿಗೆ ಭರ್ಜರಿ ಗುಡ್ ನ್ಯೂಸ್; ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಉದ್ಯೋಗಾಕಾಂಕ್ಷಿʼಗಳಿಗೆ ಭರ್ಜರಿ ಗುಡ್ ನ್ಯೂಸ್; ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ಚಿಂತನೆ

ರಾಜ್ಯೋತ್ಸವ ದಿನವಾದ ಇಂದು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡುವ ಕುರಿತಂತೆ ಚಿಂತನೆ ನಡೆಸಲಾಗಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಈ ವಿಷಯ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡು ವರ್ಷ ಸಡಿಲಿಕೆ ಮಾಡುವ ಆಲೋಚನೆಯಿದ್ದು ಶೀಘ್ರದಲ್ಲೇ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ವಯೋಮಿತಿ ಹೆಚ್ಚಳ ಮಾಡುವಂತೆ ಸಾಕಷ್ಟು ಒತ್ತಡವಿದ್ದು, ಈ ಕಾರಣಕ್ಕಾಗಿಯೇ ನೇಮಕಾತಿ ಪ್ರಕ್ರಿಯೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದೆ. ಶೀಘ್ರದಲ್ಲೇ ವಯೋಮಿತಿ ಸಡಿಲಿಕೆ ಕುರಿತು ಅಂತಿಮ ತೀರ್ಮಾನ ಕೈಗೊಂಡು ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...